Karnataka NewsPolitics

*ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಪ್ರೆಸ್ ಕ್ಲಬ್ ನ ವಿಶೇಷ ಪ್ರಶಸ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳಕರ್ ಆಯ್ಕೆಯಾಗಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರಕಾರದ ಪ್ರತಿಷ್ಠಿತ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಕ್ಕಾಗಿ ಬೆಂಗಳೂರು ಪ್ರೆಸ್ ಕ್ಲಬ್ ನ ವಿಶೇಷ ಪ್ರಶಸ್ತಿಗೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಆಯ್ಕೆ ಮಾಡಲಾಗಿದೆ.

ಪಂಚ ಗ್ಯಾರಂಟಿಗಳಲ್ಲೇ ಅತ್ಯಂತ ದೊಡ್ಡದಾದ ಗೃಹಲಕ್ಷ್ಮೀ ಯೋಜನೆಯನ್ನು ಲಕ್ಷ್ಮೀ ಹೆಬ್ಬಾಳಕರ್ ಅವರು ರಾಜ್ಯದ 1.25 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ಯಶಸ್ವಿಯಾಗಿ ತಲುಪಿಸುತ್ತಿದ್ದಾರೆ. ತನ್ಮೂಲಕ ಮಹಿಳೆಯರ ಸ್ವಾವಲಂಬನೆಗೆ ಪ್ರಯತ್ನಿಸುತ್ತಿದ್ದಾರೆ.

Home add -Advt

ಜನವರಿ 12ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ.

Related Articles

Back to top button