Latest

5 ಹಾಗೂ 8ನೇ ತರಗತಿ ಪಬ್ಲಿಕ್ ಪರೀಕ್ಷೆ; ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 5 ಹಾಗೂ 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯಪೀಠ ನೀಡಿದ್ದ ಆದೇಶಕ್ಕೆ ತಡೆ ನಿಡಲು ಹೈಕೋರ್ಟ್ ವಿಭಾಗೀಯ ಪೀಠ ನಿರಾಕರಿಸಿದೆ.

ಮಾರ್ಚ್ 13ರಂದು 5 ಹಾಗೂ 8ನೇ ತರಗತಿಯ ಪಬ್ಲಿಕ್ ಪರೀಕ್ಷೆಗೆ ಸಿದ್ಧತೆ ನಡೆಸಲಾಗಿತ್ತು. ಆದರೆ ಪೋಷಕರ ವಿರೋಧ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯಪೀಠ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಏಕಸದಸ್ಯಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು.

Home add -Advt

ಮೇಲ್ಮನವಿ ಅರ್ಜಿ ವಿಚರಣೆ ನಡೆಸಿದ ವಿಭಾಗೀಯ ಪೀಠ, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದು, ಪರೀಕ್ಷೆ ಮುಂದೂಡುವಂತೆ ಸೂಚಿಸಿದೆ. ಅಲ್ಲದೇ ಮುಂದಿನ ವಿಚಾರಣೆಯನ್ನು ಮಾರ್ಚ್ 14ಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಮುಂದೂಡಿದೆ.

Related Articles

Back to top button