
ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಸಚಿವರು
ಪ್ರಗತಿವಾಹಿನಿ ಸುದ್ದಿ: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿದರು.
ಈ ವೇಳೆ ಮಠದ ವತಿಯಿಂದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೇರಿದಂತೆ ಇನ್ನಿತರ ಗಣ್ಯರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಮಠದ ಆವರಣದಲ್ಲಿರುವ ಚಾಮುಂಡಿ ಪಾದ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಸಚಿವರು, ಬಳಿಕ ಉಪಹಾರ ಕೂಟದಲ್ಲಿ ಸಿಎಂ ಜತೆಗೂಡಿ ಪಾಲ್ಗೊಂಡರು.

ಸುತ್ತೂರು ಶ್ರೀಗಳಾದ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿಯಾಗಿ ಆಶೀರ್ವಾದ ಪಡೆದರು. ಈ ವೇಳೆ ಸುತ್ತೂರು ಶ್ರೀಗಳು ಸಚಿವರನ್ನು ಮಠದ ಪರವಾಗಿ ಸನ್ಮಾನಿಸಿದರು.
ಈ ವೇಳೆ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಮಂಕಾಳ್ ವೈದ್ಯ, ಡಾ.ಎಂ.ಸಿ.ಸುಧಾಕರ್, ಶಾಸಕರಾದ ತನ್ವೀರ್ ಸೇಠ್, ಪುಟ್ಟರಂಗ ಶೆಟ್ಟಿ, ಅನಿಲ್ ಚಿಕ್ಕಮಾದು, ಡಿ.ರವಿಶಂಕರ್, ಗಣೇಶ್ ಪ್ರಸಾದ್, ಶ್ರೀವತ್ಸ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ