*ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಇಲಾಖೆಯ ಸಂಬಂಧಿಸಿದಂತೆ ಸಭೆ ನಡೆಸಿದ ಸಚಿವರು
ಪ್ರಗತಿವಾಹಿನಿ ಸುದ್ದಿ: ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳನ್ನು ಜಾರಿಗೊಳಿಸುವಾಗ ಇರುವ ಅಡೆತಡೆಗಳನ್ನು ನಿವಾರಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.
ಸುವರ್ಣ ವಿಧಾನಸೌಧದಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಸಮಸ್ಯೆಗಳನ್ನು ಸಹಾನುಭೂತಿಯಿಂದ ಅಲಿಸಿದರು.
ಸಿಐಟಿಯು ಅಧ್ಯಕ್ಷರಾದ ವರಲಕ್ಷ್ಮೀ ಅವರು ಮಕ್ಕಳ ರಕ್ಷಣೆ ಹಾಗೂ ಇಲಾಖೆ ಯೋಜನೆಗಳ ಅನುಷ್ಠಾನಗೊಳಿಸುವಲ್ಲಿ ಇರುವ ಕೆಲವು ನೂನ್ಯತೆಗಳ ಕುರಿತು ಸಭೆಯಲ್ಲಿ ಸಚಿವರ ಗಮನ ಸೆಳೆದರು.

ಮಕ್ಕಳ ರಕ್ಷಣೆ ಸೇರಿದಂತೆ ಇಲಾಖೆಯ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಇರುವ ತೊಡಕುಗಳನ್ನು ನಿವಾರಿಸಲು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಹಣಕಾಸು ವಿಷಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚಿಸಲು ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಶೀಘ್ರವೇ ಪ್ರತ್ಯೇಕ ಸಭೆ ಆಯೋಜಿಸುವುದಾಗಿ ಸಚಿವರು ಭರವಸೆ ನೀಡಿದರು.
ಈ ವೇಳೆ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ್ ಬಬಲೇಶ್ವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಮಕ್ಕಳ ನಿರ್ದೇಶನಾಲಯದ ನಿರ್ದೇಶಕರಾದ ಡಾ.ಸ್ನೇಹಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಮಹೇಶ್ ಬಾಬು, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ವಲ್, ಸಿಐಟಿಯು ಅಧ್ಯಕ್ಷರಾದ ವರಲಕ್ಷ್ಮೀ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



