Kannada NewsKarnataka NewsLatestPolitics

*ಬೈಂದೂರು ಬಳಿ ಭೀಕರ ಅಪಘಾತ: ವಿದ್ಯಾರ್ಥಿಗಳು ಸೇರಿ ಹಲವರ ಸ್ಥಿತಿ ಗಂಭೀರ: ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಬಸ್ ಹಾಗೂ ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಲ್ಲೂರು-ನೇರಳಕಟ್ಟೆ ರಸ್ತೆಯ ಶೆಟ್ರಕಟ್ಟೆ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಲ್ಲೂರು, ನೆರಳಕಟ್ಟೆಯ ಶೆಟ್ರಕಟ್ಟೆ ಪೆಟ್ರೋಲ್ ಬಂಕ್ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವವರಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ.

Home add -Advt

ಬಹುತೇಕ ಕಾಲೇಜು ವಿದ್ಯಾರ್ಥಿಗಳೇ ಪ್ರಯಾಣಿಸುತ್ತಿದ್ದ ಬಸ್ ಅಪಘಾತದ ವಿಷಯ ತಿಳಿದು ಆಘಾತವಾಯಿತು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ, ಈ ವೇಳೆ ಕುಟುಂಬ ಸದಸ್ಯರು ಧೈರ್ಯದಿಂದ ಇರಬೇಕು ಎಂದು ಸಚಿವರು ವಿನಂತಿಸಿದ್ದಾರೆ.

ಘಟನೆ ಕುರಿತು ಅಧಿಕಾರಿಗಳಿಂದ ನಿರಂತರ ಮಾಹಿತಿ ಪಡೆಯುತ್ತಿರುವೆ. ಯಾರೂ ಆತಂಕಗೊಳ್ಳುವುದು ಬೇಡ ಎಂದರು.

Related Articles

Back to top button