Kannada NewsKarnataka NewsLatest

*ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ:ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ*

ಪ್ರಗತಿವಾಹಿನಿ ಸುದ್ದಿ: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ತೀಬ್ವ್ರ ವಿವಾದಕ್ಕೆ ಕಾರಣವಗಿದ್ದು,ಈ ಘಟನೆಯನ್ನು ಖಂಡಿಸಿರುವ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ ಬರೆದು ದೂರು ನೀಡಿದೆ.

Home add -Advt

ಸಿಇಟಿ ಪರೀಕ್ಷೆಯ ಮೊದಲ ದಿನ ಬೆಂಗಳೂರಿನ ಮಡಿವಾಳ ಕಪಾನಿಧಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿಗಳು ಐವರು ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದರು. ಈ ಘಟನೆ ಬೆನ್ನಲ್ಲೇ ಚಿಕ್ಕಬಳ್ಳಾಪುರದಲ್ಲಿಯೂ ಇಂತದ್ದೇ ಘಟನೆ ವರದಿಯಾಗಿದೆ. ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಕ್ರಮವನ್ನು ಬ್ರಾಹ್ಮಣ ಸಮುದಾಯ ತೀವ್ರವಾಗಿ ಖಂಡಿಸಿದೆ. ಇದು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬ್ರಾಹ್ಮಣ ಮಹಾಸಭಾ, ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರದ ಕಾಲೇಜಿನ ಪರವಾನಗಿ ರದ್ದುಪಡಿಸುವಂತೆ ಆಗ್ರಹಿಸಿದೆ. ಅಲ್ಲದೇ ಸಂಬಂಧಿಸಿದ ಸಂಸ್ಥೆಗೆ ಕನಿಷ್ಠ 25 ಲಕ್ಷ ರೂ. ದಂಡ ವಿಧಿಸಬೇಕೆಂದು ಒತ್ತಾಯಿಸಿದೆ.

Related Articles

Back to top button