EducationKannada NewsKarnataka NewsLatest

*ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್*

ಆನ್ ಲೈನ್ ತರಬೇತಿಗೆ ಮೊಬೈಲ್ ಆ್ಯಪ್ ಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿ ಜಿಲ್ಲೆಯ ಯುವಕ-ಯುವತಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯ ಗ್ರಾಮ ಪಂಚಾಯತಿಗಳ ಮೂಲಕ ಆನ್ ಲೈನ್ ತರಬೇತಿ ನೀಡುವ ಸಲುವಾಗಿ ಮೊಬೈಲ್ ಆ್ಯಪ್ ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತಿ ಸಿಇಒ ಪ್ರಸನ್ನ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಸಚಿವರು, ಜಿಲ್ಲಾ ಪಂಚಾಯತ್ ಸ್ಟುಡಿಯೋದಿಂದ ಪ್ರತಿದಿನ ಸಂಜೆ 5.30 ರಿಂದ 7 ಗಂಟೆಯವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ತರಬೇತಿ ನೀಡಲಾಗುತ್ತದೆ. ಜಿಲ್ಲೆಯ 155 ಗ್ರಾಮ ಪಂಚಾಯತಿಗಳಲ್ಲಿ ಏಕಕಾಲದಲ್ಲಿ ತರಬೇತಿ ನಡೆಯಲಿದೆ ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button