*ವರಮಹಾಲಕ್ಷ್ಮೀ ಪೂಜೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*


ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಿರೇ ಬಾಗೇವಾಡಿ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ಪ್ರಗತಿಬಂಧು ಜ್ಞಾನವಿಕಾಸ ಸ್ವಸಹಾಯ ಸಂಘಗಳ ಒಕ್ಕೂಟ ಬೆಂಡಿಗೇರಿ ವಲಯ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು.
ರಾಜರ್ಷಿ ಡಾ. ಡಿ ವಿರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಡಾ. ಹೇಮಾವತಿ ವೀ. ಹೆಗ್ಗಡೆಯವರ ಕೃಪಾಶೀರ್ವಾದ ಸದಾ ನಮ್ಮೆಲ್ಲರ ಮೇಲಿದೆ. ಅವರ ನಡೆ, ನುಡಿ ನಮಗೆಲ್ಲ ಆದರ್ಶವಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಮೂಲಕ ರಾಜ್ಯಾದ್ಯಂತ ಅವರು ಜನರ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಹೆಬ್ಬಾಳಕರ್ ಈ ಸಂದರ್ಭದಲ್ಲಿ ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಮಲ್ಲಯ್ಯ ಶಿವಬುದ್ಧಯ್ಯ ಹಿರೇಮಠ್ ಸ್ವಾಮಿಗಳು, ಶ್ರೀ ಶಂಕರ ಸುರಗಿಮಠ್ ಸ್ವಾಮಿಗಳು, ಸಿ. ಸಿ. ಪಾಟೀಲ, ಚಂದ್ರಪ್ಪ ಉಪ್ಪಿನ್, ಶಿವಾನಂದ ಚಂಡು, ಸತೀಶ್ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ