Karnataka NewsLatestPolitics

*ಪುನರ್ವಸತಿ ಕಾರ್ಯಕರ್ತರ ಗೌರವಧನ ಹೆಚ್ಚಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಕೃಷ್ಣ ರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಪ್ರಶ್ನೆಗೆ ಉತ್ತರಿಸಿದ ಸಚಿವರು

ಪ್ರಗತಿವಾಹಿನಿ ಸುದ್ದಿ: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಹೇಳಿದರು.

ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮೈಸೂರಿನ ಕೃಷ್ಣ ರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದರು.

Home add -Advt

ಪ್ರಸ್ತುತ 5601 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, 450 ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ 172 ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಸಚಿವರ ಮಾಹಿತಿ ನೀಡಿದರು.

ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಗೌರವಧನ ಆಧಾರದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ವಿಕಲಚೇತನ ಗ್ರಾಮೀಣ ಹಾಗೂ ನಗರ ಪುನವರ್ಸತಿ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಕಾರ್ಯಕರ್ತರನ್ನು ಕಾರ್ಮಿಕ ಇಲಾಖೆಯ ಕನಿಷ್ಠ ವೇತನಕ್ಕೊಳಪಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆರ್ಥಿಕ ಇಲಾಖೆಯ ಅನುಮೋದನೆಯಂತೆ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಸಚಿವರು ಉತ್ತರಿಸಿದರು.

Related Articles

Back to top button