
ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲನೆ
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣವರದಲ್ಲಿರುವ ಕೇಂದ್ರ ಮತ್ತು ರಾಜ್ಯ ಪುರಸ್ಕೃತ ಮಹಿಳೆಯರ ಮತ್ತು ಮಕ್ಕಳ ಪೌಷ್ಟಿಕ ಆಹಾರ ತಯಾರಿಕೆ ಮತ್ತು ತರಬೇತಿ ಕೇಂದ್ರ (ಎಂಎಸ್ ಪಿಸಿ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ ನೀಡಿ, ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಗುಣಮಟ್ಟವನ್ನು ಪರಿಶೀಲಿಸಿದರು.
ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ನೀಡಲಾಗುವ ಆಹಾರ ಪದಾರ್ಥಗಳ ತಯಾರಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಯಾವುದೇ ಲೋಪದೋಷ ಆಗದಂತೆ, ಎಚ್ಚರ ವಹಿಸಿ ಆಹಾರ ಪದಾರ್ಥಗಳನ್ನು ಪೂರೈಸಲು ಸೂಚನೆ ನೀಡಿದರು. ಜೊತೆಗೆ ಪ್ರತಿಯೊಂದು ಆಹಾರ ಪದಾರ್ಥಗಳನ್ನು ಪರಿಶೀಲಿಸಿ, ಮಾಹಿತಿ ನೀಡಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಹಿರಿಯ ನಾಗರೀಕರ, ವಿಶೇಷ ಚೇತನರ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಶೇಷಾಧಿಕಾರಿ ಎನ್. ಎಚ್. ನಿಶ್ಚಲ್, ಬೆಂಗಳೂರು ನಗರ ಜಿಲ್ಲೆಯ ಉಪ ನಿರ್ದೇಶಕ ಸಿದ್ದ ರಾಮಪ್ಪ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ