
ಪ್ರಗತಿವಾಹಿನಿ ಸುದ್ದಿ: ಫ್ರ್ಯಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಇಂದಿನಿಂದ ನಡೆಯಲಿರುವ ಒಲಿಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಲಿ, ಹೆಚ್ಚು ಪದಕಗಳನ್ನು ಜಯಿಸುವಂತಾಗಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶುಭಕೋರಿದ್ದಾರೆ.
ಜುಲೈ 26 ರಿಂದ ಆಗಸ್ಟ್ 11 ರವರೆಗೆ ಒಟ್ಟು 17 ದಿನಗಳ ಕಾಲ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯಲಿದ್ದು, ಈ ಕ್ರೀಡಾ ಹಬ್ಬದಲ್ಲಿ ಮಿಂಚಲು ನಮ್ಮ ಭಾರತೀಯ ಆಟಗಾರರು ಸಜ್ಜಾಗಿದ್ದಾರೆ. ಈ ಬಾರಿಯೂ ಹೆಚ್ಚಿನ ಸಂಖ್ಯೆಯಲ್ಲಿ ಪದಕಗಳನ್ನು ಗೆದ್ದುಕೊಂಡು ಬರಲೆಂದು ಮನದುಂಬಿ ಹಾರೈಸುತ್ತೇನೆ
ಜಾವಲಿನ್ ಥ್ರೋ ಪಟು ನೀರಜ್ ಚೋಪ್ರಾ ಈ ಬಾರಿಯೂ ಚಿನ್ನ ಪದಕ ಗೆದ್ದು ಭಾರತಕ್ಕೆ ಕೀರ್ತಿ ತರಲಿ. ಅಲ್ಲದೆ, ಬ್ಯಾಡ್ಮಿಂಟನ್, ಹಾಕಿ, ರೆಸ್ಲಿಂಗ್, ಶೂಟಿಂಗ್, ಬಾಕ್ಸಿಂಗ್ ನಲ್ಲಿ ಪದಕಗಳನ್ನು ನಿರೀಕ್ಷಿಸಲಾಗಿದೆ. ಪ್ಯಾರಿಸ್ ನಲ್ಲಿ ಹೆಚ್ಚು ಪದಕಗಳನ್ನು ಭಾರತೀಯ ಕ್ರೀಡಾಪಟುಗಳು ಜಯಿಸಲಿ ಅನ್ನೋದೆ ನನ್ನ ಕನಸಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ