Belagavi NewsBelgaum NewsKannada NewsKarnataka NewsPolitics
*ಬಿಜೆಪಿಯವರು ಇನ್ನಾದರೂ ಕೆಟ್ಟ ರಾಜಕೀಯ ಬಿಡಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿಯವರು ಇಡಿ, ಐಟಿ ಮುಂತಾದ ಸಂಸ್ಥೆಗಳನ್ನು ವಿರೋಧ ಪಕ್ಷದವರ ಮೇಲೆ ಸೇಡು ತೀರಿಸಿಕೊಳ್ಳಲು ರಾಜಕೀಯ ದಾಳವಾಗಿ ಬಳಸುತ್ತಿರುವ ಕುರಿತು ನಾವು ಮೊದಲಿನಿಂದಲೂ ಹೇಳುತ್ತ ಬಂದಿದ್ದೇವೆ. ಈಗ ಈ ರಾಷ್ಟ್ರದ ಸರ್ವೋಚ್ಚ ನ್ಯಾಯಾಲಯವೇ ನಮ್ಮ ಅಭಿಪ್ರಾಯಕ್ಕೆ ಅಧಿಕೃತ ಮುದ್ರೆ ಒತ್ತಿದಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ಇಡಿಗೆ ಚಾಟಿ ಬೀಸಿರುವ ಕುರಿತು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನಾದರೂ ಇಂತಹ ಕೆಟ್ಟ ರಾಜಕೀಯವನ್ನು ಬಿಜೆಪಿಯವರು ಬಿಡಲಿ. ಮತ್ತು ಈವರೆಗಿನ ತಪ್ಪನ್ನು ಒಪ್ಪಿಕೊಂಡು ರಾಷ್ಟ್ರದ ಜನತೆಯ ಕ್ಷಮೆ ಕೇಳಲಿ ಎಂದು ಹೆಬ್ಬಾಳಕರ್ ಆಗ್ರಹಿಸಿದ್ದಾರೆ.