
https://youtu.be/Mh38tdvpFDo
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮಾರಕ ರೋಗ ಕೊರೋನಾ ವೈರಸ್ ತೀವ್ರವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಲಕ್ಷ್ಮಿ ತಾಯಿ ಫೌಂಡೇಶನ್ ನಿರಂತರವಾಗಿ ಹೋರಾಟ ನಡೆಸುತ್ತಿದೆ. ಜನಜಾಗ್ರತಿ ಅಭಿಯಾನ, ದಿನಸಿ ಸಾಮಗ್ರಿಗಳ ವಿತರಣೆ, ಔಷಧಗಳ ಸಿಂಪರಣೆ, ಮಾಸ್ಕ್, ಸೆನಿಟೈಸರ್ ವಿತರಣೆ ಮೊದಲಾದ ಚಟುವಟಿಕೆಗಳನ್ನು ನಡೆಸುತ್ತಿದೆ.
ಇದೀಗ ಇದರ ಜೊತೆಗೆ, ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಅಗ್ನಿ ಶಾಮಕದಳದ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ಈ ಎಲ್ಲ ಅಧಿಕಾರಿಗಳ ಸೇವೆಗಳನ್ನು ಪರಿಗಣಿಸಿ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಸನ್ಮಾನಿಸಿ ಕೃತಜ್ಞತೆಗಳನ್ನು ಸಲ್ಲಿಸಲಾಯಿತು. ಜೊತೆಗೆ ಅಧಿಕಾರಿಗಳ ಸುರಕ್ಷತೆಯ ಹಿತ ದೃಷ್ಟಿಯಿಂದ ಎರಡು ನೂರು ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಾಟಲ್ ಗಳನ್ನು ಹಸ್ತಾಂತರಿಸಲಾಯಿತು.
ಲಕ್ಷ್ಮಿ ತಾಯಿ ಫೌಂಡೇಶನ್ ಪದಾಧಿಕಾರಿಗಳಾದ ಚನ್ನರಾಜ ಹಟ್ಟಿಹೊಳಿ ಹಾಗೂ ಮೃಣಾಲ ಹೆಬ್ಬಾಳಕರ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ