
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಲಕ್ಷ್ಮಿ ತಾಯಿ ಫೌಂಡೇಶನ್ ಹಿಂದಿನಿಂದಲೂ ಬಡವರ ಸೇವೆಯನ್ನು ಮಾಡಿಕೊಂಡು ಬರುತ್ತಿದ್ದು, ಇದು ನಿರಂತರವಾಗಿ ಮುಂದುವರಿಯಲಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.

ಲಕ್ಷ್ಮಿ ತಾಯಿ ಫೌಂಡೇಶನ್ ಕೇವಲ ಕೊರೋನಾ ಸಂದರ್ಭದಲ್ಲಿ ಜನರ ಸೇವೆ ಮಾಡುತ್ತಿಲ್ಲ. ಈ ಹಿಂದೆ ಪ್ರವಾಹ ಬಂದಾಗಲೂ ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡಿದೆ. ಸಂಕಷ್ಟಕ್ಕೊಳಗಾದವರಿಗೆ ಅಗತ್ಯ ಸಾಮಗ್ರಿಗಳನ್ನು ವಿತರಿಸಿದೆ. ದಿನದ 24 ಗಂಟೆ, ವರ್ಷದ 365 ದಿನವೂ ಜನರ ಸೇವೆಗಾಗಿ ಮುಡಿಪಾಗಿದೆ ಎಂದು ಅವರು ತಿಳಿಸಿದರು.

ತೀರಾ ಹಿಂದುಳಿದಿದ್ದ ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಕಟ್ಟುವ ನನ್ನ ಕನಸು ಕಮರಿಲ್ಲ. ಅದು ಎಂದಿಗೂ ಕಮರಲು ನೀವು ಅವಕಾಶ ನೀಡುವುದಿಲ್ಲ ಎನ್ನುವ ವಿಶ್ವಾಸವಿದೆ. ಎಂತಹ ಸಂದರ್ಭ ಬಂದರೂ ಎದೆಗುಂದದೆ ಮುನ್ನುಗ್ಗೋಣ. ಕ್ಷೇತ್ರದ ಜನರು, ದೇವರು ನನ್ನ ಕೈ ಬಿಡುವುದಿಲ್ಲ ಎನ್ನುವ ನಂಬಿಕೆ ನನಗಿದೆ. ನೀವೆಲ್ಲ ತಾಳ್ಮೆಯಿಂದ ಸಹಕಾರ ನೀಡುತ್ತಿರುವುದಕ್ಕೆ ನಾನು ಸದಾ ಋಣಿಯಾಗಿರುತ್ತೇನೆ. ನಿಮಗೆ ಎಷ್ಟು ಧನ್ಯವಾದ ಹೇಳಿದರೂ ಕಡಿಮೆಯೇ ಎಂದು ಅವರು ಭಾವುಕರಾಗಿ ನುಡಿದರು.
ಮೃಣಾಲ್ ಹೆಬ್ಬಾಳಕರ್ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ