
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – 5 ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡ ” ಶ್ರೀಮತಿ ಲಕ್ಷ್ಮೀ ತಾಯಿ ಸೌಹಾರ್ದ ಸಹಕಾರಿ ನಿಯಮಿತ, ಬೆಳಗಾವಿ ” ಅಸ್ಥಿತ್ವಕ್ಕೆ ಬಂದಿದೆ.

ಆಡಳಿತ ಮಂಡಳಿಯ ನಿರ್ದೇಶಕರ ಮೊದಲ ಸಭೆ ಗುರುವಾರ ನಡೆಯಿತು. ಈ ಸಭೆಯಲ್ಲಿ ಆಡಳಿತ ಮಂಡಳಿಗೆ ಅಧ್ಯಕ್ಷರನ್ನಾಗಿ ಚನ್ನರಾಜ ಬಿ ಹಟ್ಟಿಹೊಳಿ ಹಾಗೂ ಉಪಾಧ್ಯಕ್ಷರನ್ನಾಗಿ ಮಹಾಂತೇಶ ವಿ. ಮತ್ತಿಕೊಪ್ಪ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಜೊತೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಸರ್ವಾನುಮತದಿಂದ ಸಂಸ್ಥೆಗೆ ಗೌರವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

