Kannada NewsKarnataka NewsLatest

*ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥವಾಗಿ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಫಲಪುಷ್ಪ ಪ್ರದರ್ಶನ ಉದ್ಘಾಟನೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಲಾಲ್ ಬಾಗ್ ಇಡೀ ವಿಶ್ವದಲ್ಲಿಯೇ ಪ್ರಸಿದ್ದವಾದ ಉದ್ಯಾನವನ. ಸುಮಾರು 240 ಎಕರೆ ವಿಸ್ತೀರ್ಣವಿರುವ ಈ ಉದ್ಯಾನವನದಲ್ಲಿ ವಿವಿಧ ಬಗೆಯ ಮರಗಿಡಗಳಿವೆ. ಬ್ರಿಟೀಷರ ಕಾಲದಲ್ಲಿದ್ದ ಈ ಉದ್ಯಾನವನಕ್ಕೆ ಐತಿಹಾಸಿಕ ಮಹತ್ವವಿದೆ. 140 ಎಕರೆ ಪ್ರದೇಶದಲ್ಲಿದ್ದ ಈ ಉದ್ಯಾನವನಕ್ಕೆ ಕೆಂಗಲ್ ಹನುಮಂತಯ್ಯನವರು ಇನ್ನೂ 100 ಎಕರೆ ಪ್ರದೇಶವನ್ನು ಸ್ವಾಧೀನಪಡಿಸಿ, ಒಟ್ಟು 240 ಎಕರೆ ಪ್ರದೇಶದಲ್ಲಿರುವ ಅತಿ ದೊಡ್ಡ ಉದ್ಯಾನವಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶವನ್ನು ಅತ್ಯುತ್ತಮವಾಗಿ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಬಿಬಿಎಂಪಿ ಚುನಾವಣೆ
12 ವಾರಗಳೊಳಗೆ ವಾರ್ಡ್ ವಿಂಗಡನೆ ಮಾಡುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಅದಾದ ನಂತರ ನ್ಯಾಯಾಲಯ ಬಹುತೇಕ ಬಿಬಿಎಂಪಿ ಚುನಾವಣೆ ಕೈಗೊಳ್ಳಲು ಸೂಚಿಸುತ್ತದೆ. ಹಾಗಾಗಿ ನಾವು ಚುನಾವಣೆ ಮಾಡಲು ತಯಾರಾಗಿದ್ದೇವೆ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button