Latest

ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ

 

ಪ್ರಗತಿವಾಹಿನಿ ಸುದ್ದಿ; ರಾಂಚಿ

ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ನಾಯಕ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಹದಗೆಟ್ಟ ಕಾರಣ ದೆಹಲಿಯ ಏಮ್ಸ್‌ಗೆ ಕರೆದೊಯ್ಯಲಾಗುತ್ತಿದೆ.  ಮೇವು ಹಗರಣ ಸಂಬಂಧ ಜೈಲು ಶಿಕ್ಷೆಗೆ ಗುರಿಯಾಗಿರುವ ಆರ್‌ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಗಂಭೀರವಾಗಿದೆ.

ಬಹುಕೋಟಿ ಮೇವು ಹಗರಣದ ತಪ್ಪಿತಸ್ಥ ಎಂದು ಸಾಬೀತಾಗಿರುವ ಲಾಲೂ ಪ್ರಸಾದ್ ಯಾದವ್ ಅವರಿಗೆ ವಿಶೇಷ ಸಿಬಿಐ ನ್ಯಾಯಾಲಯ ಈಗಾಗಲೇ 5 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ. ಅಷ್ಟೇ ಅಲ್ಲ, 60 ಲಕ್ಷ ರೂ. ದಂಡ ಕೂಡಾ ವಿಧಿಸಿದೆ. ಫೆಬ್ರುವರಿ 21ರಂದು ತೀರ್ಪು ಹೊರಬಿದ್ದ ಬಳಿಕ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

ಇವರಿಗೆ ಹೃದಯ ಮತ್ತು ಮೂತ್ರಪಿಂಡದಲ್ಲಿ ಸಮಸ್ಯೆ ಉಂಟಾಗಿದೆ ಹಾಗಾಗಿ ಇಂದು ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ (ರಿಮ್ಸ್) ದೆಹಲಿಯ ಏಮ್ಸ್‌ಗೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿಸಿದ್ದಾರೆ.

ರಿಮ್ಸ್‌ನ 7 ತಜ್ಞ ವೈದ್ಯರ ತಂಡ ಲಾಲೂ ಪ್ರಸಾದ್ ಯಾದವ್ ಆರೋಗ್ಯದ ಮೇಲೆ ನಿಗಾ ಇರಿಸಿದ್ದರು. ಆದ್ರೆ, ಅವರ ದೇಹಸ್ಥಿತಿ ವಿಷಮವಾಗಿರುವ ಕಾರಣ, ದಿಲ್ಲಿ ಏಮ್ಸ್‌ಗೆ ರವಾನೆ ಮಾಡುವುದೊಂದೇ ತಮಗಿರುವ ದಾರಿ ಎಂದು ತಜ್ಞರು ತಿಳಿಸಿದ್ದಾರೆ

ಲಾಲೂ ಪ್ರಸಾದ್ ಯಾದವ್ ಗೆ ಜಾಮೀನು ಮಂಜೂರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button