
ಪ್ರಗತಿವಾಹಿನಿ ಸುದ್ದಿ: ನವದೆಹಲಿಯ ನೋಯ್ಡಾದ ಸೆಕ್ಟರ್ 94 ರಲ್ಲಿ ಲ್ಯಾಂಬೋರ್ಘಿನಿ ಕಾರು ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬರು ಇಬ್ಬರು ಕಾರ್ಮಿಕರಿಗೆ ಡಿಕ್ಕಿ ಹೊಡೆದಿದ್ದು, ಗಾಯಗೊಂಡಿದ್ದಾರೆ. ಘಟನೆಯ ನಂತರದ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ.
ಗಾಯಾಳುಗಳು ಛತ್ತೀಸ್ ಗಢ ಮೂಲದ ಕಾರ್ಮಿಕರಾಗಿದ್ದು ಇಬ್ಬರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಅವರನ್ನು ರವಿದಾಸ್ ಮತ್ತು ರಂಭು ಕುಮಾರ್ ಎಂದು ಗುರುತಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಚಾಲಕನನ್ನು ಅಜೀರ್ ನಿವಾಸಿ ದೀಪಕ್ ಎಂದು ಗುರುತಿಸಲಾಗಿದ್ದು, ವಾಹನವನ್ನು ಪುದುಚೇರಿಯಲ್ಲಿ ನೋಂದಾಯಿಸಲಾಗಿದೆ. ಆತನನ್ನು ಬಂಧಿಸಿ, ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.