Kannada NewsKarnataka NewsLatest

*ಮೂರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಸರ್ಕಾರಿ ಭೂಮಿ ಕಬಳಿಕೆ ಮಾಡಿದ ಆರೋಪದಲ್ಲಿ ಮೂರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಕಡೂರು ಪೊಲೀಸ್ ಠಾಣೆಯಲ್ಲಿ ಮೂರು ಅಧಿಕಾರಿಗಳ ವಿರಿದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

Home add -Advt

ಕಡೂರು ತಾಲೂಕು ಕಚೇರಿಯ ಹಿಂದಿನ ತಹಶೀಲ್ದಾರ್ ಉಮೇಶ್, ನಿವೃತ್ತ ಶಿರಸ್ತೇದಾರ್ ನಂಜುಂಡಯ್ಯ, ಆರ್ ಐ ಕಿರಣ್ ಕುಮಾರ್ ವಿರುದ್ಧ ದೂರು ದಾಖಲಾಗಿದೆ. ಆರೋಪಿ ಉಮೇಶ್ ಕಾರವಾರದ ಸೀಬರ್ಡ್ ನೌಕಾನೆಲೆ ಭೂ ಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತಿದ್ದಾರೆ. ಕಡೂರಿನ ಉಳ್ಳಿನಾಗರ ಗ್ರಾಮದಲ್ಲಿ 5.4 ಎಕರೆ ಸರ್ಕಾರಿ ಭೂಮಿ ಕಬಳಿಕೆಗಾಗಿ ಖಾಸಗಿ ವ್ಯಕ್ತಿಗಳ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಖಾತೆ ಮಂಜೂರು ಮಾಡಿದ್ದರು. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ಮೇರೆಗೆ ತರೀಕೆರೆ ಉಪವಿಭಾಗಾಧಿಕಾರಿ ಕಾಂತರಾಜು ಮೂವರ ವಿರುದ್ಧ ದೂರು ನೀಡಿದ್ದು, ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆಯೇ ಮೂವರು ಅಧಿಕಾರಿಗಳು ತಲೆಮರೆಸಿಕೊಂಡಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.


Related Articles

Back to top button