
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿರೋಧದ ನಡುವೆಯೂ ಭೂ ಸುಧಾರಣೆ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ವಿಧೇಯಕದ ಪ್ರಕಾರ ಇನ್ನುಮುಂದೆ ಯಾರು ಬೇಕಾದರೂ ಕೃಷಿ ಭೂಮಿ ಖರೀದಿಸಬಹುದಾಗಿದೆ.
ಕಾಂಗ್ರೆಸ್ ಸದಸ್ಯರ ಸಭಾತ್ಯಾಗ, ರೈತರ ತೀವ್ರ ವಿರೋಧದ ನಡುವೆ ಕೆಲ ತಿದ್ದುಪಡಿಗಳ ಮೂಲಕ ಭೂ ಸುಧಾರಣಾ ವಿಧೇಯಕ ಅನುಮೋದನೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ವಿಧೇಯಕದ ಪ್ರಕಾರ ಕೃಷಿ ಭೂಮಿಯನ್ನು ಯಾರುಬೇಕಾದರೂ ಖರೀದಿ ಮಾಡಬಹುದಾಗಿದೆ. ನೀರಾವರಿ ಪ್ರದೇಶದಲ್ಲಿ ಖರೀದಿ ಮಾಡುವ ಭೂಮಿಯನ್ನು ಕೃಷಿಗೆ ಮಾತ್ರ ಬಳಕೆ ಮಾಡಬೇಕು. ಈ ಹಿಂದೆ ಇದ್ದ 25 ಲಕ್ಷ ವಾರ್ಷಿಕ ಆದಾಯ ಮಿತಿಯನ್ನು ರದ್ದು ಪಡಿಸಲಾಗಿದೆ.
ಅಲ್ಲದೇ 5 ಸದಸ್ಯರಿರುವ ಒಂದು ಕುಟುಂಬ 54 ಎಕರೆ ಕೃಷಿ ಭೂಮಿ ಖರೀದಿ ಮಾಡಲು ಅವಕಾಶ ನೀಡಲಾಗಿದ್ದು, 5ಕ್ಕಿಂತ ಹೆಚ್ಚು ಜನರಿರುವ ಉಟುಂಬಕ್ಕೆ 108 ಎಕರೆ ಕೃಷಿ ಭೂಮಿ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ