*ಮಣ್ಣು ಕುಸಿದು ದುರಂತ ಪ್ರಕರಣ: ಮತ್ತೋರ್ವ ಗಾಯಾಳು ಕೂಡ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡದ ಮಣ್ಣು ಕುಸಿದು ಸಂಭವಿಸಿದ ದುರಂತದಲ್ಲಿ ಇದೀಗ ಇಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರೂ ಆಂಧ್ರಪ್ರದೇಶ ಮೂಲದ ಕಾರ್ಮಿಕರಾಗಿದ್ದಾರೆ. ಯಲಹಂಕಾ ಬಳಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ನಿನ್ನೆ ರಾತ್ರಿ ಸ್ಥಳದಲ್ಲೀ ಓರ್ವ ಕಾರ್ಮಿಕ ಸಾವನ್ನಪ್ಪಿದ್ದರು. ಓರ್ವನ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಮಣ್ಣು ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೇರಿದೆ. ಜೆ.ಶಿವ ಹಾಗೂ ಮಧುಸೂದನ್ … Continue reading *ಮಣ್ಣು ಕುಸಿದು ದುರಂತ ಪ್ರಕರಣ: ಮತ್ತೋರ್ವ ಗಾಯಾಳು ಕೂಡ ಸಾವು*