
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಹೊಸದಾಗಿ ಅಂಗನವಾಡಿ ಕೊಠಡಿಯ ನಿರ್ಮಾಣದ ಸಲುವಾಗಿ ಭೂಮಿ ಪೂಜೆ ನೆರವೇರಿಸಲಾಯಿತು.

ಕಳೆದ ವರ್ಷ ಸುರಿದ ಬಾರಿ ಮಳೆಯಿಂದಾಗಿ ಶಾಲೆಯ ಕಟ್ಟಡ ಹಾಗೂ ಕೊಠಡಿಗಳು ಸಂಪೂರ್ಣ ನಾಶವಾಗಿದ್ದು ಅವುಗಳನ್ನು ಕೂಡ ಸ್ಥಳೀಯ ಜನಪ್ರತಿನಿಧಿಗಳು, ಯುವರಾಜ ಕದಂ, ಮೃಣಾಲ್ ಹೆಬ್ಬಾಳಕರ, ಶಾಲಾ ಸಿಬ್ಬಂದಿ ಸೇರಿ ಪರಿಶೀಲನೆ ನಡೆಸಿ, ದುರಸ್ತಿಗೊಳಿಸುವ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಯುವರಾಜ ಕದಂ, ಮೃಣಾಲ್ ಹೆಬ್ಬಾಳಕರ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ