ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಶಾಸಕ ಅನಿಲ ಬೆನಕೆ ಬೆಳಗಾವಿ ಉತ್ತರ ಮತಕ್ಷೇತ್ರದ ಆಂಜನೇಯ ನಗರ, ಮಹಾಂತೇಶ ನಗರ, ಶ್ರೀನಗರ, ಕುವೆಂಪು ನಗರ, ಬಸವನಕುಡಚಿ, ಆಜಾದ ನಗರ ಹಾಗೂ ಇತರ ಪ್ರದೇಶಗಳಲ್ಲಿ ಒಟ್ಟು ೧೦ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಗೆ ಭೂಮಿ ಪೂಜೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಬೂಟ್ ಒಪ್ಪಂದದಡಿಯಲ್ಲಿ ಮತಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಇಂದು ಭೂಮಿ ಪೂಜೆ ಸಲ್ಲಿಸಲಾಗಿದೆ ಹಾಗೂ ಸಾರ್ವಜನಿಕರು ಇವುಗಳ ಸದುಪಯೋಗವನ್ನು ಪಡೆದುಕೊಂಡು ಒಳ್ಳೆಯ ಆರೋಗ್ಯವನ್ನು ಹೊಂದಬೇಕೆಂದರು. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶೀಘ್ರವಾಗಿ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕೆಂದು ಈ ಸಂದರ್ಭದಲ್ಲಿ ಸೂಚಿಸಿದರು…
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ