Kannada NewsKarnataka NewsNationalPoliticsTravelWorld
*ವೈಷ್ಟೋ ದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತ: 30 ಜನರ ಸಾವು*

ಪ್ರಗತಿವಾಹಿನಿ ಸುದ್ದಿ: ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿರುವ ಮಾತಾ ವೈಷ್ಟೋ ದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತ ಸಂಭವಿಸಿ ಕನಿಷ್ಠ 30 ಜನರು ಸಾವನ್ನಪ್ಪಿರು ದುರ್ಘಟನೆ ನಡೆದಿದೆ
ಕಳೆದ ಕೆಲ ದಿನಗಳಿಂದ ಭಾರೀ ಮಳೆ ಆಗುತಿತ್ತು. ವೈಷ್ಟೋದೇವಿ ದೇವಾಲಯದ ಬಳಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ 30 ಜನರ ಸಾವಾಗಿದೆ. ಘಟನೆಯಲ್ಲಿ ಇನ್ನೂ 23 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದ್ದು, ಅವಶೇಷಗಳಡಿ ಸಿಲುಕಿರುವ ಜನರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
ನಿನ್ನೆ ತಡರಾತ್ರಿಯಿಂದ ಈ ಪ್ರದೇಶದಲ್ಲಿ ಭಾರೀ ಮತ್ತು ನಿರಂತರ ಮಳೆಯಾದ ಕಾರಣ ಮಾತಾ ವೈಷ್ಟೋದೇವಿಯ ಪವಿತ್ರ ದೇವಾಲಯಕ್ಕೆ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.