Karnataka News

*ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ: 9 ಜನರು ನಾಪತ್ತೆ; ಮಣ್ಣಿನಡಿ ಸಿಲುಕಿರುವ ಶಂಕೆ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟದಿಂದಾಗಿ ಅನಾಹುತಗಳು ಸಂಭವಿಸುತ್ತಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, 9 ಜನರು ನಾಪತ್ತೆಯಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಇದೇ ಸಂದರ್ಭದಲ್ಲಿ ಗ್ಯಾಸ್ ಟ್ಯಾಂಕರ್ ಒಂದು ನದಿಗೆ ಬಿದ್ದಿದ್ದು, ಈ ಘಟನೆಗಳ ಬೆನ್ನಲ್ಲೇ 9 ಜನರು ನಾಪತ್ತೆಯಾಗಿದ್ದಾರೆ. 9 ಜನರು ಮಣ್ಣಿನಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಎನ್ ಡಿಆರ್ ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ರಕ್ಷಣಾಕಾರ್ಯಾಚರಣೆ ಚುರುಕುಗೊಂಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button