Kannada NewsLatestNational

*ಶಿವ ದೇವಾಲಯದ ಮೇಲೆ ಭೂ ಕುಸಿತ; 30 ಜನ ಸಾವನ್ನಪ್ಪಿರುವ ಶಂಕೆ*

9 ಮೃತದೇಹ ಹೊರತೆಗೆದ ರಕ್ಷಣಾ ಸಿಬ್ಬಂದಿ

Home add -Advt


ಪ್ರಗತಿವಾಹಿನಿ ಸುದ್ದಿ; ಶೀಮ್ಲಾ: ಹಿಮಾಚಲ ಪ್ರದೇಶದಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸಿದ್ದು, ಹಲವೆಡೆ ಭೂ ಕುಸಿತವುಂಟಾಗಿದೆ. ಶಿವ ದೇವಸ್ಥಾನದ ಮೇಲೆಯೇ ಭೂಕುಸುತವಾಗಿದ್ದು, 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಶೀಮ್ಲಾದ ಸಮ್ಮರ್ ಹಿಲ್ ಪ್ರದೇಶದಲ್ಲಿ ಶಿವ ದೇವಾಲಯದ ಮೇಲೆ ಭೂಕುಸಿತವಾಗಿದ್ದು, 20ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯಾಚರಣೆ ವೇಳೆ 9 ಜನರ ಮೃತದೇಹ ಹೊರತೆಗೆಯಲಾಗಿದೆ.

ಸೋಮವಾರವಾಗಿದ್ದ ಕಾರಣ ಶಿವ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಶಿವ ಭಕ್ತರು ಬಂದಿದ್ದು. ಈ ವೇಳೆಯೇ ದುರಂತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. 15 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Related Articles

Back to top button