ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

ಪ್ರಗತಿವಾಹಿನಿ ಸುದ್ದಿ; ಬೀದರ್: ಶಿಕ್ಷಕಿಯೊಬ್ಬಳು ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ನಡೆದಿದೆ.

ಪೂಜಾ (24) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಭಾಲ್ಕಿ ತಾಲೂಕಿನ ಭಾಲ್ಕೇಶ್ವರ ದೇವಸ್ಥಾನಕ್ಕೆ ಹಾರಿ ಪೂಜಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟು ಬರೆದಿಟ್ಟು ಶಿಕ್ಷಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Home add -Advt

ಹಲವು ಬಾರಿ ವರನ ಕಡೆಯವರು ನೋಡಿ ಹೋದರೂ ನಿಶ್ಚಿತಾರ್ಥವಾಗಿಲ್ಲ ಎಂಬ ಕಾರಣಕ್ಕೆ ಮನನೊಂದು ಶಿಕ್ಷಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಪೂಜಾ ಭಾಲ್ಕಿಯ ಖಾಸಗಿ ಚನ್ನಬಸವ ಪದವಿ ಕಾಲೇಜಿನಲ್ಲಿ ರಾಸಾಯನಿಕ ಶಾಸ್ತ್ರದ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಈ ಕುರಿತು ಭಾಲ್ಕಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button