ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ: ಕಳೆದ ಬಾರಿಯ ಸಮೀಕ್ಷೆಗಳು ಕಾಂಗ್ರೆಸ್ ಪರವೇ ಇದ್ದವು. ನಂತರ ಅದು ಸುಳ್ಳಾಯಿತು. ಈ ಬಾರಿ ಅಧಿಕಾರಕ್ಕೆ ಬರುವುದು ನಾವೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕಳೆದ ಬಾರಿ ಕಾಂಗ್ರೆಸ್ 107ಕ್ಕೂ ಹೆಚ್ಚು ಸ್ಥಾನ ಪಡೆಯುವುದಾಗಿ ಹೇಳಿದ್ದವು. ಆದರೆ ಚುನಾವಣಾ ಫಲಿತಾಂಶದ ದಿನ ಅದು ತಲೆಕೆಳಗಾಯಿತು. ಈಗಲೂ ಅದೇ ನಂಬಿಕೆಯಿದೆ. ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ನಂತರ ಚುನಾವಣೋತ್ತರ ಸಮೀಕ್ಷೆಗಳು ಹೊರ ಬಿದ್ದಿದ್ದು ಬಹುತೇಕ ಸಮೀಕ್ಷೆಗಳು ಕಾಂಗ್ರೆಸ್ಗೆ ಬಹುಮತ ದೊರೆಯುವುದಾಗಿ ಹೇಳಿವೆ. ಕೇವಲ 2 ಸಮೀಕ್ಷೆಗಳು ಮಾತ್ರ ಬಿಜೆಪಿ ಬಹುಮತ ಪಡೆಯುವುದಾಗಿ ತಿಳಿಸಿವೆ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು ಬಿಜೆಪಿಗೆ ಜನಬೆಂಬಲ ಸಿಗುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ