ಪ್ರಗತಿವಾಹಿನಿ ಸುದ್ದಿ; ಮುಂಬೈ: ಖ್ಯಾತ ಗಾಯಕಿ, ಭಾರತ ರತ್ನ ಪುರಸ್ಕೃತೆ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
92 ವರ್ಷದ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಗೆ ಒಳಪಟ್ಟಿದ್ದರು. ಈ ವೇಳೆ ವರದಿಯಲ್ಲಿ ಪಾಸಿಟಿವ್ ಬಂದಿದ್ದು ಚಿಕಿತ್ಸೆಗಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತೀಚಿನ ಮಾಹಿತಿ ಪ್ರಕಾರ ಲತಾ ಮಂಗೇಶ್ಕರ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಕರುನಾಡಿಗೆ ಶುರುವಾಯ್ತು ಮತ್ತೆ ಲಾಕ್ ಡೌನ್ ಭೀತಿ; ಸಿಎಂ ಸಭೆಗೂ ಮುನ್ನ ತುರ್ತು ಸಭೆ ಕರೆದ ಆರೋಗ್ಯ ಸಚಿವ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ