Latest

ರಾಷ್ಟ್ರಾದ್ಯಂತ 2 ದಿನ ಶೋಕಾಚರಣೆ ಘೋಷಣೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭಾರತ ರತ್ನ, ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ವಿಧಿವಶ ಹಿನ್ನೆಲೆಯಲ್ಲಿ ದೇಶಾದ್ಯಂತ ಎರಡು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಲತಾ ಮಂಗೇಶ್ಕರ್ ನಿಧನ ಹಿನ್ನೆಲೆಯಲ್ಲಿ ದೇಶದಲ್ಲಿ ಎರಡು ದಿನಗಳ ಕಾಲ ಶೋಕಾಚರಣೆ ನಡೆಸಲಾಗುವುದು. ರಾಷ್ಟ್ರಧ್ವಜ ಅರ್ಧ ಮಟ್ಟದಲ್ಲಿ ಹಾರಾಡಲಿದೆ. ಅಲ್ಲದೇ ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಲತಾ ಮಂಗೇಶ್ಕರ್ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೇಂದ್ರ ಸಚಿವ ನಿತಿನ್ ಗಡ್ಕರಿ, ರಾಜನಾಥ್ ಸಿಂಗ್ ಸೇರಿದಂತೆ ಗಣ್ಯಾತಿ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಹೇಳಲಾಗದಷ್ಟು ದು:ಖಿತನಾಗಿದ್ದೇನೆ; ಲತಾ ಮಂಗೇಶ್ಕರ್ ನಿಧನಕ್ಕೆ ಪ್ರಧಾನಿ ಸಂತಾಪ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button