ಪ್ರಗತಿವಾಹಿನಿ ಸುದ್ದಿ; ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎಂದು ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಲತಾ ಮಂಗೇಶ್ಕರ್ ಚೇತರಿಸಿಕೊಂಡಿದ್ದರು. ಆದರೆ ಇದೀಗ ಅವರ ಆರೋಗ್ಯ ಮತ್ತೆ ಗಂಭೀರವಾಗಿದ್ದು, ವೆಂಟಿಲೇಟರ್ ನಲ್ಲಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ.ಪ್ರತೀತ್ ಸಮ್ದಾನಿ ತಿಳಿಸಿದ್ದಾರೆ.
ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದು, ವೈದ್ಯರು ಅವರ ಆರೋಗ್ಯದ ಬಗ್ಗೆ ನಿಗಾವಹಿಸಿದ್ದಾರೆ ಎಂದು ಹೇಳಿದ್ದಾರೆ.
ಲತಾ ಮಂಗೇಶ್ಕರ್ ಅವರಿಗೆ ಜನವರಿ 8ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಾ.ಪ್ರತೀತ್ ಸಮ್ದಾನಿ ನೇತೃತ್ವದ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ.
ಹಿಜಾಬ್ ಧರಿಸುವವರು ಪಾಕಿಸ್ತಾನಕ್ಕೆ ಹೋಗಲಿ; ಯತ್ನಾಳ್ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ