ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಬೆಳಿಗ್ಗೆ ಪ್ರಕಟವಾಗಲಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಢವಢವ ಆರಂಭವಾಗಿದೆ.
ಈ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದು, ನಾಳೆ ಬೆಳಿಗ್ಗೆ 11:30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಯಾವುದೇ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಿ ಫಲಿತಾಂಶ ನೋಡುವ ಅಗತ್ಯವಿಲ್ಲ. ವಿದ್ಯಾರ್ಥಿಗಳ ಮೊಬೈಲ್ ಗೆ ನೇರವಾಗಿ ಫಲಿತಾಂಶದ ಮಾಹಿತಿ ನೀಡಲಾಗುತ್ತದೆ ಎಂದರು.
ಇನ್ನು ನಾಳೆ ಮಧ್ಯಾಹ್ನ 2 ಗಂಟೆ ಬಳಿಕ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ.