Kannada Rajyotsava – Home Add
Valmiki Jayanti Add

ನಾಲ್ವರು ಮಕ್ಕಳನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಪೋಷಕರು ಕೆಲಸಕ್ಕೆ ಹೋಗಿದ್ದಾಗ ನಡೆಯಿತು ಘೋಷ ಘಟನೆ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಒಂದೇ ಕುಟುಂಬದ ನಾಲ್ವರು ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಮಹಾರಾಷ್ಟ್ರದ ಜಾಲ್ಗಾನ್ ನಲ್ಲಿ ನಡೆದಿದೆ.

ಇಲ್ಲಿನ ಬೊರ್ಖೆಡಾ ಗ್ರಾಮದಲ್ಲಿ ಪೋಷಕರು ಕೆಲಸಕ್ಕೆ ಹೋಗಿದ್ದಾಗ ದುಷ್ಕರ್ಮಿಗಳು ನಾಲ್ವರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಮೃತ ಮಕ್ಕಳನ್ನು ಸೈತಾ (12), ರಾವಲ್ (11), ಅನಿಲ್ (8) ಹಾಗೂ ಸುಮನ್ (3) ಎಂದು ಗುರುತಿಸಲಾಗಿದೆ.

ಮಧ್ಯಪ್ರದೇಶ ಮೂಲದ ಮೆಹ್ತಾಬ್ ಹಾಗೂ ರುಮಾಲಿ ಎಂಬ ದಂಪತಿ ತಮ್ಮ ಮಕ್ಕಳೊಂದಿಗೆ ಕೃಷಿ ಕೆಲಸಕ್ಕೆಂದು ಇಲ್ಲಿಗೆ ವಲಸೆ ಬಂದಿದ್ದರು. ಪೋಷಕರು ಕೆಲಸಕ್ಕೆ ತೆರಳಿದ್ದ ವೇಳೆ ದುಷ್ಕರ್ಮಿಗಳು ನಾಲ್ವರು ಮಕ್ಕಳನ್ನು ಒಂದೇ ಕೊಡಲಿಯಿಂದ ಕೊಚ್ಚಿ ಕೊಲೆಗೈದಿದ್ದಾರೆ. ಕೃತ್ಯಕ್ಕೆ ಕಾರಣ ಇನ್ನೂ ನಿಗೂಢವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ.