GIT add 2024-1
Laxmi Tai add
Beereshwara 33

ಬೆಳಗಾವಿ ಸೇರಿ 8 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ; ಇನ್ನಷ್ಟು ಕಠಿಣ ನಿಯಮ?

1 ವಾರ ಕಠಿಣ ಲಾಕ್ ಡೌನ್

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ 8 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ ಖಚಿತವಾಗಿದೆ.

ಇಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಬಂದ ಅಭಿಪ್ರಾಯದಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಲಾಕ್ ಡೌನ್ ಜೂನ್ 14ಕ್ಕೆ ಮುಕ್ತಾಯವಾಗಲಿದ್ದು, ಜೂನ್ 14ರ ಬಳಿಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿರುವ 8 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಯಲಿದೆ. ಈ ಜಿಲ್ಲೆಗಳಿಗಾಗಿ ಕಠಿಣ ನಿಯಮಗಳ ಪ್ರತ್ಯೇಕ ಗೈಡ್ ಲೈನ್ಸ್ ಜಾರಿಮಾಡಲು ಸರ್ಕಾರ ಚಿಂತನೆ ನಡೆಸಿದೆ. ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಲಿದೆ.

Emergency Service

ಕೋವಿಡ್ ಪಾಸಿಟಿವಿಟಿ ರೇಟ್ ಹೆಚ್ಚಿರುವ ಬೆಳಗಾವಿ, ಮೈಸೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಯಲಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಲಾಕ್ ಡೌನ್ ತೆರವು ಮಾಡುವುದು ಖಚಿತವಾಗಿದೆ.

ಸಂಜೆ 6 ಗಂಟೆಗೆ ನಡೆಯಲಿರುವ ಕೊವಿಡ್ ಉಸ್ತುವಾರಿ ಸಚಿವರ ಸಭೆಯ ಬಳಿಕ ಈ ಬಗ್ಗೆ ಅಧಿಕೃತವಾಗಿ ಮುಖ್ಯಮಂತ್ರಿಗಳು ಪ್ರಕಟಿಸಬಹುದು.

ಬೆಳಗಾವಿಯಲ್ಲಿ ಲಾಕ್ ಡೌನ್ ಮುಂದುವರಿಕೆ: ಕಾರಜೋಳ ಮನವಿಗೆ ಸಿಎಂ ಮರು ಪ್ರಶ್ನೆ (Updated)

ಲಾಕ್ ಡೌನ್ ಭವಿಷ್ಯ: 3 ಸಭೆಗಳ ಬಳಿಕ ಸಿಎಂ ತೀರ್ಮಾನ
ಕಳ್ಳ ಮಾರ್ಗದಲ್ಲಿ ಭಾರತ ಪ್ರವೇಶಿಸಿದ್ದ ಪಾಕಿಸ್ತಾನಿ ಮಹಿಳೆ ಭಟ್ಕಳದಲ್ಲಿ ಬಂಧನ

Bottom Add3
Bottom Ad 2