Athani Takkennavar
Beereshwara13
GIT add4

ACB ರದ್ದು; ಎಲ್ಲಾ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆ; ಹೈಕೋರ್ಟ್ ಮಹತ್ವದ ಆದೇಶ

ಲೋಕಾಯುಕ್ತಕ್ಕೆ ಮತ್ತೆ ಬಲ

KLE1099 Add

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ)ಯನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್, ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವಂತೆ ಮಹತ್ವದ ಆದೇಶ ನೀಡಿದೆ.

ಎಸಿಬಿ ರಚನೆ ಕುರಿತ ರಾಜ್ಯ ಸರ್ಕಾರದ ಆದೇಶವನ್ನು ರದ್ದುಪಡಿಸಿರುವ ಹೈಕೋರ್ಟ್ ನ್ಯಾ.ಬಿ.ವೀರಪ್ಪ ಹಾಗೂ ನ್ಯಾ.ಕೆ.ಎಸ್.ಹೇಮಲೇಖಾ ಅವರನ್ನೊಳಗೊಂಡ ಪೀಠ, ಎಸಿಬಿಯನ್ನು ಲೋಕಾಯುಕ್ತ ವ್ಯಾಪ್ತಿಗೆ ನೀಡುವಂತೆ ಆದೇಶ ನೀಡಿದೆ.

ಇನ್ಮುಂದೆ ಎಸಿಬಿಗೆ ಪೊಲೀಸ್ ಠಾಣೆ ಸ್ಥಾನಮಾನ ಇರುವುದಿಲ್ಲ. ಎಸಿಬಿಯಲ್ಲಿ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವಂತೆ ತಿಳಿಸಿದೆ. ಇದೇ ವೇಳೆ ಕರ್ನಾಟಕ ಲೋಕಾಯುಕ್ತ ಕಾಯ್ದೆಯಲ್ಲಿ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಲೋಕಾಯುಕ್ತ ಅಧಿಕಾರಿಗಳನ್ನು ಮೂರು ವರ್ಷಗಳ ಅವಧಿಗೆ ನೇಮಕ ಮಾಡಬೇಕು. ಲೊಕಾಯುಕ್ತರ ನೇಮಕದ ವೇಳೆ ಅರ್ಹತೆ ಮಾನದಂಡ ಪರಿಗಣಿಸಬೇಕುಹೊರತು ಜಾತಿ ಆಧಾರದಲ್ಲಿ ನೇಮಕವಾಗಬಾರದು. ಭ್ರಷ್ಟಾಚಾರ ಆರೋಪ ಹೊತ್ತವರು ಪಾರಾಗುವ ಸ್ಥಿತಿ ಇರಬಾರದು. ಈ ಕಾರಣಕ್ಕೆ ಲೋಕಾಯುಕ್ತ ಪೊಲೀಸರೇ ಪ್ರಕರಣದ ತನಿಖೆ ಮುಂದುವರೆಸಬೇಕು ಎಂದು ಅಭಿಪ್ರಾಯಪಟ್ಟಿದೆ.

ಈ ಮೂಲಕ ರಾಜ್ಯದಲ್ಲಿ ಎಸಿಬಿಯನ್ನು ವಜಾಗೊಳಿಸಿರುವ ಹೈಕೋರ್ಟ್ ಮತ್ತೆ ಲೋಕಾಯುಕ್ತವನ್ನು ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಮಹತ್ವದ ತೀರ್ಪು ನೀಡಿದೆ.
ಅಮೃತ ಮಹೋತ್ಸವಕ್ಕೆ ವಿಶೇಷ ಕೊಡುಗೆ; ಉಚಿತ ಬಸ್ ಸೇವೆ ಘೋಷಿಸಿದ BMTC

Nivedita Navalgund
You cannot copy content of this page