Advertisement -Home Add
Crease wise (28th Jan)
KLE1099 Add

ಪತ್ರಕರ್ತ, ಹಿರಿಯ ನಟ ಸುರೇಶ್ ಚಂದ್ರ ಇನ್ನಿಲ್ಲ

ಅನಾರೋಗ್ಯದಿಂದ ವಿಧಿವಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ಪತ್ರಕರ್ತ, ನಟ ಸುರೇಶ್ ಚಂದ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸುರೇಶ್ ಚಂದ್ರ ಅವರು 1980ರ ದಶಕದಿಂದ ಪತ್ರಕರ್ತರಾಗಿ ಗುರುತಿಸಿಕೊಂಡಿದ್ದರು. ಸಂಜೆವಾಣಿ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸಿದ್ದ ಅವರು ಕಳೆದ ವರ್ಷ ನಿವೃತ್ತಿಪಡೆದಿದ್ದರು. ಕನ್ನಡ ಚಿತ್ರರಂಗದ ಹಿರಿಯ ನಟರಾದ ಶಂಕರ್ ನಾಗ್, ವಿಷ್ಣು ವರ್ಧನ್, ಅಂಬರೀಶ್ ಅವರೊಂದಿಗೆ ಒಡನಾಟ ಹೊಂದಿದ್ದ ಅವರು 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು.
ಅಧಿಕಾರದಲ್ಲಿದ್ದವರು ಬಾಯಿಬಿಡುತ್ತಿಲ್ಲ; ಬಿಜೆಪಿ ನಾಯಕರ ವಿರುದ್ಧ ಸತೀಶ್ ಜಾರಕಿಹೊಳಿ ಆಕ್ರೋಶ