Advertisement -Home Add

ರಾಮಮಂದಿರ ನಿರ್ಮಾಣ ಆರಂಭವಾಗುತ್ತಿದ್ದಂತೆಯೇ ಕೊವಿಡ್ ವೈರಸ್ ನಾಶವಾಗುತ್ತೆ

ಬಿಜೆಪಿ ನಾಯಕ ರಾಮೇಶ್ವರ್ ಶರ್ಮಾ ಹೇಳಿಕೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆ ಆಗಸ್ಟ್ 5 ರಂದು ನಡೆಯಲಿದ್ದು, ರಾಮಮಂದಿರ ನಿರ್ಮಾಣ ಕಾರ್ಯಗಳು ಪ್ರಾರಂಭವಾಗುವುದರೊಂದಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಅಂತ್ಯ ಪ್ರಾರಂಭವಾಗಲಿದೆ ಎಂದು ಮಧ್ಯಪ್ರದೇಶ ವಿಧಾನಸಭೆ ತಾತ್ಕಾಲಿಕ ಸ್ಪೀಕರ್, ಬಿಜೆಪಿ ನಾಯಕ ರಾಮೇಶ್ವರ್ ಶರ್ಮಾ ಹೇಳಿದ್ದಾರೆ.

ಭಗವಾನ್ ರಾಮ ಮಾನವಕುಲದ ಕಲ್ಯಾಣಕ್ಕಾಗಿ ಮತ್ತು ಆ ಸಮಯದಲ್ಲಿ ರಾಕ್ಷಸರನ್ನು ಕೊಲ್ಲಲು ಪುನರ್ ಜನ್ಮ ಪಡೆದಿದ್ದರು. ರಾಮಮಂದಿರ ನಿರ್ಮಾಣ ಪ್ರಾರಂಭವಾದ ಕೂಡಲೇ ಕೋವಿಡ್-19 ಸೋಂಕಿನ ನಾಶವೂ ಪ್ರಾರಂಭವಾಗುತ್ತದೆ ಎಂದು ತಿಳಿಸಿದ್ದಾರೆ.

ಭಾರತ ಮಾತ್ರವಲ್ಲ ಇಡೀ ಪ್ರಪಂಚ ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿದೆ. ನಾವು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದಷ್ಟೇ ಅಲ್ಲ, ನಮ್ಮ ಪವಿತ್ರ ವ್ಯಕ್ತಿಗಳನ್ನು ನೆನಪಿಸಿಕೊಳ್ಳುತ್ತಿದ್ದೇವೆ. ಸುಪ್ರೀಂ ಕೋರ್ಟ್ ಕೂಡ ರಾಮಮಂದಿರ ನಿರ್ಮಿಸಲು ಅನುಮತಿ ನೀಡಿದೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 5 ರಂದು ರಾಮಮಂದಿರ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಹೇಳಿದ್ದಾರೆ. ಅಲ್ಲದೇ ಈ ಕಾರ್ಯಕ್ರಮದಲ್ಲಿ ಹೆಚ್ಚು ಜನರು ಭಾಗವಹಿಸುತ್ತಿಲ್ಲ. ಜತೆಗೆ ಸಾಮಾಜಿಕ ಅಂತರ ಪಾಕಾಯ್ದುಕೊಂಡು ಸಮಾರಂಭದಲ್ಲಿ ಭಾಗವಹಿಸಲಾಗುವುದು ಎಂದಿದ್ದಾರೆ.