Athani Takkennavar
Beereshwara13
GIT add4

ಅಮೃತ ಮಹೋತ್ಸವಕ್ಕೆ ವಿಶೇಷ ಕೊಡುಗೆ; ಉಚಿತ ಬಸ್ ಸೇವೆ ಘೋಷಿಸಿದ BMTC

ಆಗಸ್ಟ್ 15ರಂದು ಉಚಿತ ಪ್ರಯಾಣಕ್ಕೆ ಅವಕಾಶ

KLE1099 Add

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸ ಅಂಗವಾಗಿ ಬಸ್ ಪ್ರಯಾಣಿಕರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ.

ಆಗಸ್ಟ್ 15ರಂದು ರಾಜಧಾನಿ ಬೆಂಗಳೂರಿನಾದ್ಯಂತ ಇಡೀ ದಿನ ಪ್ರಯಾಣಿಕರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಬಹುದಾಗಿದೆ. 24 ಗಂಟೆಗಳ ಕಾಲ ಉಚಿತ ಪ್ರಯಾಣವಿರಲಿದೆ. ವೋಲ್ವೋ, ಬಿಎಂಟಿಸಿ ಸೇರಿ ಎಲ್ಲಾ ಬಸ್ ಗಳಲ್ಲಿಯೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.

ರಾಜ್ಯ ಸರ್ಕಾರ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಆಗಸ್ಟ್ 15ರಂದು ಉಚಿತ ಬಸ್ ಪ್ರಯಾಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಇದರಿಂದ ಬಿಎಂಟಿಸಿಗೆ 3 ಕೋಟಿ ಹೊರೆಯಾಗಲಿದೆ. ಇನ್ನು ಆಗಸ್ಟ್ 14ರಂದು 75 ಎಲೆಕ್ಟ್ರಿಕ್ ಬಸ್ ಗಳ ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಬಿಎಂಟಿಸಿ ಮಾಹಿತಿ ನೀಡಿದೆ.

ನಾಳೆಯಿಂದಲೇ ದ್ವಿತೀಯ ಪಿಯು ಪೂರಕ ಪರೀಕ್ಷೆ ಆರಂಭ

ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ; ಮಾರಾಮಾರಿಯಲ್ಲಿ ಇಬ್ಬರ ದುರ್ಮರಣ

Nivedita Navalgund
You cannot copy content of this page