GIT add 2024-1
Laxmi Tai add
Beereshwara 33

ಹಾಡಹಗಲೇ ನಡುರಸ್ತೆಯಲ್ಲಿ ಯುವತಿಗೆ ಮೈ-ಕೈ ಮುಟ್ಟಿ ಲೈಂಗಿಕ ಕಿರುಕುಳ

ಬೆಂಗಳೂರಿನಲ್ಲಿ ಕಿಡಿಗೇಡಿಗಳ ಅಟ್ಟಹಾಸ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ಯುವತಿಯೋರ್ವಳಿಗೆ ಕಿರಾತಕರು ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಯುವತಿ ಆಫೀಸ್ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ಆಕೆಯನ್ನು ಹಿಂಬಾಲಿಸಿದ ದುಷ್ಕರ್ಮಿಗಳು ರಸ್ತೆ ಮಧ್ಯೆ ಯುವತಿಯನ್ನು ತಡೆದು ಅಂಗಾಂಗ ಮುಟ್ಟಿ ಹಲ್ಲೆ ನಡೆಸಿದ್ದಾರೆ.

Emergency Service

ಯುವತಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಂತೆ ಆಕೆಯನ್ನು ತಬ್ಬಿಕೊಂಡು ಲೈಂಗಿಕ ದೌರ್ಜನ್ಯವೆಸಿಗಿದ್ದಾರೆ ಎನ್ನಲಾಗಿದೆ. ಈ ಕುರಿತು ಯುವತಿ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ; ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್

Bottom Add3
Bottom Ad 2