Athani Takkennavar
Beereshwara13
GIT add4

ಭೀಮ್ಸ್ ಆಸ್ಪತ್ರೆಗೆ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಮನವಿ ಮಾಡಿದ ಶಾಸಕ ಅನಿಲ ಬೆನಕೆ

ಸಿಎಂ ಬೊಮ್ಮಾಯಿ, ಸಚಿವ ಕಾರಜೋಳ ಭೇಟಿಯಾದ ಶಾಸಕರು

KLE1099 Add

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿಗಳನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಬೇಟಿ ಮಾಡಿ ಭಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗಾಗಿ ಮನವಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲೆಯ ಅನೇಕ ಕಡೆಗಳಿಂದ ಮತ್ತು ಹೊರ ರಾಜ್ಯಗಳಾದ ಗೋವಾ ಮತ್ತು ಮಹರಾಷ್ಟ್ರಗಳಿಂದ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ರೋಗಿಗಳು ಬರುವುದರಿಂದ ಹಾಗೂ ಜನಸಂಖ್ಯೆಯು ಹೆಚ್ಚಾಗಿರುವುದರಿಂದ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಭೀಮ್ಸ್ ಆವರಣದಲ್ಲಿ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳನ್ನು ಹಾಗೂ ಜಿಲ್ಲಾಉಸ್ತುವಾರಿ ಸಚಿವರನ್ನು ಬೇಟಿ ಮಾಡಿವಿನಂತಿಸಲಾಗಿದೆ ಎಂದರು.

ಮನವಿಗೆ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಸಕಾರಾತ್ಮಕ ಸ್ಪಂದನೆಯನ್ನು ವ್ಯಕ್ತಪಡಿಸಿದ್ದು, ತ್ವರಿತವಾಗಿ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಹಾಸ್ಯಕ್ಕೆ ಮನಸಾರೆ ನಕ್ಕ ಯಡಿಯೂರಪ್ಪ

ಸಿದ್ದರಾಮಯ್ಯ ಹಾಸ್ಯಕ್ಕೆ ಮನಸಾರೆ ನಕ್ಕ ಯಡಿಯೂರಪ್ಪ

Nivedita Navalgund
You cannot copy content of this page