GIT add 2024-1
Laxmi Tai add
Beereshwara 33

ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್; ಹೊಸ ಬಾಂಬ್ ಸಿಡಿಸಿದ ನಳೀನ್ ಕುಮಾರ್ ಕಟೀಲ್

ಮಾತಿನ ಬರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಹಾನಗಲ್ ಹಾಗೂ ಸಿಂದಗಿ ಉಪಚುನಾವಣಾ ಅಖಾಡ ಕಾವೇರಿದ್ದು, ರಾಜಕೀಯ ನಾಯಕರು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಮಾತಿನ ಬರದಲ್ಲಿ ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕ ‘ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್’ ಎಂಬ ವರದಿಯಿದೆ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

Emergency Service

ಹುಬ್ಬಳ್ಳಿಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಡ್ರಗ್ ಪೆಡ್ಲರ್…ಹೀಗಂತ ನಾನು ಹೇಳುತ್ತಿಲ್ಲ ವರದಿಯಲ್ಲಿ ಹೇಳಲಾಗಿದೆ. ಒಂದು ರಾಜಕೀಯ ಪಕ್ಷವನ್ನೇ ಮುನ್ನಡೆಸಲಾಗದವರು ಇನ್ನು ದೇಶವನ್ನು ಮುನ್ನಡೆಸಲು ಸಾಧ್ಯವೇ? ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷಗಾದಿಗಾಗಿ ತಾಯಿ ಸೋನಿಯಾ ಗಾಂಧಿ ಹಾಗೂ ಮಗ ರಾಹುಲ್ ಗಾಂಧಿ ಮಧ್ಯೆಯೇ ಪೈಪೋಟಿ ಇದೆ. ಒಂದು ರಾಷ್ಟ್ರೀಯ ಪಕ್ಷವನ್ನು ಮುನ್ನೆಡೆಸಲು ಸಾಧ್ಯವಾಗುತ್ತಿಲ್ಲ ಇವರಿಗೆ ಇನ್ನು ದೇಶ ಮುನ್ನಡೆಸುವ ಕನಸು ಕಾಣುತ್ತಿದ್ದಾರೆ ಎಂದು ಗುಡುಗಿದರು.

ನಮ್ಮ ಪ್ರಧಾನಿ ’ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಅಂದ್ರೆ ವಿಪಕ್ಷ ನಾಯಕ ಸಿದ್ದರಾಮಯ್ಯನವರದ್ದು ’ಸಾಬರ್ ಕಾ ಸಾಥ್ ಸಾಬರ್ ಕಾ ವಿಕಾಸ್’. ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಮುಸ್ಲೀಂರ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಇನ್ನು ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ಜೋಡೆತ್ತುಗಳಲ್ಲ, ಕಾಡೆತ್ತುಗಳು. ಒಬ್ಬರಿಗೊಬ್ಬರು ಕಾದಾಟ ಆರಂಭಿಸಿದ್ದಾರೆ. ಉಗ್ರಪ್ಪ ಪಿಸುಮಾತಿನ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ. ಮುಂದಿನ ಚುನಾವಣೆ ವೇಳೆಗೆ ಕಾಂಗ್ರೆಸ್ ಇಬ್ಭಾಗವಾಗಲಿದೆ ಎಂದು ಹೇಳಿದರು.
ಬೆಳಗಾವಿಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ; ಮೂವರ ಬಂಧನ

Bottom Add3
Bottom Ad 2