Reporter wanted
Crease wise New Design

ಸಾಹುಕಾರ್ ಲಾಬಿ ವರ್ಕೌಟ್; ಯೋಗೇಶ್ವರ್ ಗೆ ಮಂತ್ರಿ ಸ್ಥಾನ

ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಸ್ನೇಹಿತನ ಪರವಾಗಿ ಮಾಡಿದ ಲಾಬಿ ಪರಿಣಾಮ ಎಂಎಲ್ ಸಿ ಸಿ.ಪಿ ಯೇಗೇಶ್ವರ್ ಗೆ ಮಂತ್ರಿ ಸ್ಥಾನ ಸಿಗುವುದು ಖಚಿತವಾಗಿದೆ.

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿ.ಪಿ.ಯೋಗೇಶ್ವರ್ ಗೆ ನೂರಕ್ಕೆ ನೂರರಷ್ಟು ಮಂತ್ರಿ ಸ್ಥಾನ ನೀಡುತ್ತೇವೆ. ಅವರಿಗೆ ಮಂತ್ರಿ ಸ್ಥಾನ ಖಚಿತ ಎಂದು ಹೇಳಿದ್ದಾರೆ.

ಈ ಮೂಲಕ ರಾಜ್ಯ ಬಿಜೆಪಿ ನಾಯಕರ ವಿರೋಧದ ನಡುವೆಯೂ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಲು ಸಿಎಂ ಮುಂದಾಗಿದ್ದಾರೆ.