Latest

ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಸಿಎಂ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಪಾಸೀಟೀವ್ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ ಎಸ್ ಯಡಿಯೂರಪ್ಪ ಕಳೆದ 10 ದಿನಗಳಲ್ಲಿ ಸಂಪೂರ್ಣ ಗುಣಮುಖರಾಗಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಸಿಎಂ ಯಡಿಯೂರಪ್ಪ ಆಸ್ಪತ್ರೆಗೆ ದಾಖಲಾದ ಬಳಿಕ ಇಂದು ಎರಡನೇ ಬಾರಿಗೆ ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದು, ಇಂದು ಬೆಳಗ್ಗೆ ವರದಿ ನೆಗೆಟಿವ್ ಬಂದಿದೆ. ಮುಖ್ಯಮಂತ್ರಿಗಳ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ಯಡಿಯೂರಪ್ಪನವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ನೆಗೆಟೀವ್ ಬಂದ ಹಿನ್ನಲೆಯಲ್ಲಿ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದು, ಬಳಿಕ 7 ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಲಿದ್ದಾರೆ.

Home add -Advt

Related Articles

Back to top button