Reporter wanted
Crease wise (28th Jan)

ಸವಾಲುಗಳನ್ನು ಅವಕಾಶವಾಗಿ ಪರಿವರ್ತಿಸಿ ಕಾರ್ಯನಿರ್ವಹಿಸಿ; ಅಧಿಕಾರಿಗಳಿಗೆ ಸಿಎಂ ಸಲಹೆ

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗ್ರಾಮ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಮಸ್ಯೆಗಳ ಇತ್ಯರ್ಥವಾದರೆ ರಾಜಧಾನಿಗೆ ಬರುವವರ ಸಂಖ್ಯೆ ಕಡಿಮೆಯಾಗುತ್ತದೆ. ಈ ದಿಸೆಯಲ್ಲಿ ತಳಮಟ್ಟದ ಆಡಳಿತಯಂತ್ರ ಸದಾ ಸ್ಪಂದನಶೀಲವಾಗಿರುವಂತೆ ನೋಡಿಕೊಳ್ಳುವ ಜವಾಬ್ದಾರಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಹೊಣೆಯಾಗಿರುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕಳೆದ 10 ತಿಂಗಳಲ್ಲಿ ಹಲವು ಸವಾಲುಗಳನ್ನು ಎದುರಿಸಿದ್ದು, ಬರ, ಪ್ರವಾಹ, ಕೋವಿಡ್ ಹೀಗೆ ಅನೇಕ ಸವಾಲುಗಳನ್ನು ಎದುರಿಸಿದ್ದೇವೆ. ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಯಲ್ಲಿ ಅಧಿಕಾರಿಗಳ ಅತ್ಯುತ್ತಮ ಕಾರ್ಯನಿರ್ವಹಣೆಗೆ ಅಭಿನಂದನೆಗಳು ಎಂದರು.

ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸಿ, ಆತ್ಮ ನಿರ್ಭರ ಭಾರತ ನಿರ್ಮಾಣ ಮಾಡುವಂತೆ ಪ್ರಧಾನಿ ಮೋದಿ ಕರೆ ನೀಡಿರುವಂತೆ ನಾವು ಕಾರ್ಯನಿರ್ವಹಿಸಬೇಕಿದೆ ಎಂದು ಹೇಳಿದರು.

ಭಾಷಣದ ಸಮಗ್ರ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ –

HON’BLE CHIEF MINISTER’S TALKING POINTS FOR DC, CEO AND SP – FINAL