
ತಿಂಗಳಲ್ಲಿ 15 ದಿನ ಅರಣ್ಯದಲ್ಲಿರಿ: ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ
5 ವರ್ಷಗಳಲ್ಲಿ ಅರಣ್ಯ ಪ್ರದೇಶ ಶೇ.30ಕ್ಕೆ ಹೆಚ್ವಿಸಲು ಪ್ರಯತ್ನಿಸಿ


ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಳಿಂದ ಹಿಡಿದು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳವರೆಗಿನ. ಎಲ್ಲಾ ಹಂತದ ಅಧಿಕಾರಿಗಳು ಕಚೇರಿಗಳನ್ನು ಬಿಟ್ಟು ತಿಂಗಳಿಗೆ 15 ದಿನ ಅರಣ್ಯದಲ್ಲಿರಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ್ದ ನಿಗಮದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಹಿರಿಯ ಅಧಿಕಾರಿಗಳು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದೀರಿ. ಕಚೇರಿ ಬಿಟ್ಟು ಹೊರಗೇ ಬರ್ತಿಲ್ಲ. ಅರಣ್ಯಕ್ಕೆ ಹೋಗಿ. ತಿಂಗಳಲ್ಲಿ 15 ದಿನ ಅರಣ್ಯದಲ್ಲಿ ಇದ್ಧರೆ ಉಳಿದ ಸಿಬ್ಬಂದಿಗೆ ಆತ್ಮಸ್ಥೈರ್ಯ ಬರುತ್ತದೆ. ಅವರಿಗೆ ಮಾರ್ಗದರ್ಶನ ಸಿಗುತ್ತದೆ. ಹಿರಿಯ ಅಧಿಕಾರಿಗಳು ಅರಣ್ಯ ಕಾಪಾಡುವ ಕೆಲಸದಲ್ಲಿ ಇದ್ದಾರೆ ಎಂಬ ಭಾವನೆ ಬರುತ್ತದೆ. ಹೀಗಾಗಿ 15 ದಿನ ಅರಣ್ಯದಲ್ಲಿ ಇರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
ಐದು ವರ್ಷಗಳಲ್ಲಿ ಅರಣ್ಯ ಪ್ರದೇಶವನ್ನು ಕನಿಷ್ಠ ಶೇ. 30ಕ್ಕೆ ಹೆಚ್ವಿಸಲು ಪ್ರಯತ್ನಿಸಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
ಪ್ರಸ್ತುತ ಶೇ 23 ರಷ್ಟಿರುವ ಅರಣ್ಯ ಪ್ರದೇಶವನ್ನು ಐದು ವರ್ಷಗಳಲ್ಲಿ ಕನಿಷ್ಠ ಶೇ 30ಕ್ಕೆ ಹೆಚ್ವಿಸಲು ಪ್ರಯತ್ನಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬಿಕಿನಿಯಲ್ಲಿ ಕ್ಯಾಮರಾಗೆ ಪೋಸ್ ನೀಡಿದ ‘ಕನ್ನಡತಿ’

ನಿಖರ, ನಿರಂತರ ಮತ್ತು ನಿಷ್ಪಕ್ಷಪಾತ ಸುದ್ದಿಗಳಿಗಾಗಿ ಪ್ರಗತಿವಾಹಿನಿ ಗ್ರುಪ್ ಸೇರಲು NEWS ಎಂದು ಟೈಪ್ ಮಾಡಿ 8197712235 ನಂಬರ್ ಗೆ ವಾಟ್ಸಪ್ ಮಾಡಿ.
ದಯವಿಟ್ಟು ನಮ್ಮ YouTube ಚಾನೆಲ್ ಗೆ ಸಬ್ ಸ್ಕ್ರೈಬ್ ಮಾಡಿ