Yoga add Final 1
KLE1099 Add

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಹಿನ್ನೆಲೆ

GIT Add 3
Beereshwara add 12

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನಿರುದ್ಯೋಗ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಪ್ಪು ಬಟ್ಟೆ, ಕೈಗೆ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸಂಸತ್ ಮಾರ್ಗ್ ನಲ್ಲಿ ಪ್ರತಿಭಟನೆ ನಡೆಸಿದ್ದು, ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆದಿದ್ದು, ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ. ಸಂಸತ್ ನಲ್ಲಿ ಜನ ಸಾಮಾನ್ಯರ ಸಂಕಷ್ಟ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲಿಸರು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನ ಹಲವು ಸಂಸದರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರ ಪೊಲೀಸರ ಮೂಲಕ ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುತ್ತಿದೆ. ನಮ್ಮ ಹಲವು ಸಂಸದರ ಮೇಲೆ ಹಲ್ಲೆ ನಡೆಸಿರುವ ಪೊಲೀಸರು ಅಮಾನವೀಯವಾಗಿ ಎಳೆದೊಯ್ಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ರ್ಯಾಂಪ್ ವಾಕ್ ಮಾಡಿದ್ದ ಸಿಬ್ಬಂದಿ; 5 ಪೊಲೀಸ್ ಅಧಿಕಾರಿಗಳ ವರ್ಗಾವಣೆ

Home add- Bottom