GIT add 2024-1
Laxmi Tai add
Beereshwara 33

5 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಒಂದೇ ದಿನದಲ್ಲಿ 18,552 ಹೊಸ ಪ್ರಕರಣ ಪತ್ತೆ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 5 ಲಕ್ಷ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 18,552 ಹೊಸ ಪ್ರಕರಣ ಪತ್ತೆಯಾಗಿದೆ.

ಶುಕ್ರವಾರ 18,552 ಜನರಲ್ಲಿ ಕೊರೊನಾ ಸೋಂಕುಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 5,08,953ಕ್ಕೆ ಏರಿಕೆಯಾಗಿದೆ. ಇದಲ್ಲದೆ 384 ಜನ ಒಂದೇ ದಿನ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ಸಾವಿನ ಸಂಖ್ಯೆ 15,685ಕ್ಕೆ ಏರಿಕೆಯಾಗಿದೆ.

Emergency Service

ಈವರೆಗೆ ಕೊರೋನಾದಿಂದ ಗುಣ ಆದವರು 2,95,881 ಜನ ಮಾತ್ರ. ದೇಶದಲ್ಲಿ ಇನ್ನೂ 1,97,387 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಭಾರತದಲ್ಲಿ ಪ್ರತಿದಿನ ಜೂನ್ 11ರಿಂದ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 12 ತಾರೀಖಿನಿಂದ 11 ಸಾವಿರಕ್ಕೂ ಹೆಚ್ಚು‌ ಪ್ರಕರಣಗಳು, ಜೂನ್ 17ರಿಂದ 12 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 18ರಿಂದ 13 ಸಾವಿರಕ್ಕೂ‌ ಹೆಚ್ಚು‌ ಪ್ರಕರಣಗಳು, ಜೂನ್ 19ರಿಂದ 14 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 23ರಿಂದ 15 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 24ರಿಂದ 16 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಹಾಗೂ ಜೂನ್ 25ರಿಂದ17 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದವು. ಜೂನ್ 26ರಿಂದ 18 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದೆ. ಕಳೆದ ನಾಲ್ಕು ದಿನಗಳಿಂದ ದಿನವೊಂದರಲ್ಲಿ ದಾಖಲಾದ ಸಂಖ್ಯೆಯಲ್ಲಿ ಪ್ರತಿದಿನ ಸಾವಿರ ಸಂಖ್ಯೆಗಳು ಹೆಚ್ಚಾಗುತ್ತಿರುವುದು ಆತಂಕಕಾರಿಗಿದೆ.

Bottom Add3
Bottom Ad 2