Advertisement

6 ಲಕ್ಷ ಗಡಿ ತಲುಪಿದ ಕೊರೊನಾ ಸೋಂಕಿತರ ಸಂಖ್ಯೆ

24 ಗಂಟೆಯಲ್ಲಿ 507 ಜನ ಸಾವು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಸೋಂಕು ಪೀಡಿತರ ಸಂಖ್ಯೆ ಇದೀಗ 6 ಲಕ್ಷ ಗಡಿ ತಲುಪಿದೆ.

ಭಾರತದಲ್ಲಿ ಜೂನ್ 26ರಿಂದ 18 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗತೊಡಗಿವೆ. ಇದೇ ಟ್ರೆಂಡ್ ಮುಂದುವರೆದಿದ್ದು ಇಂದು ಕೂಡ 18,653 ಪ್ರಕರಣಗಳು ಕಂಡುಬಂದಿವೆ. ಈ ಮೂಲಕ ದೇಶದ ಕೊರೊನಾ ಪೀಡಿತರ ಸಂಖ್ಯೆ 5,85,493ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 507 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 17,400ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 3,47,979 ಜನ ಮಾತ್ರ. ದೇಶದಲ್ಲಿ ಇನ್ನೂ 2,20,114 ಜನರಲ್ಲಿ ಕೊರೊನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.