GIT add 2024-1
Laxmi Tai add
Beereshwara 33

ದೇಶದಲ್ಲಿ ಒಂದೇ ದಿನ 28,701 ಜನರಲ್ಲಿ ಕೊರೊನಾ ಸೋಂಕು ಪತ್ತೆ

8,78,254ಕ್ಕೆ ಏರಿಕೆಯಾದ ರೋಗಿಗಳ ಸಂಖ್ಯೆ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 28,701 ಹೊಸ ಪ್ರಕರಣಗಳು ಪತ್ತೆಯಾಗಿವೆ.

Emergency Service

ಒಂದೇ ದಿನ 28,701 ಪ್ರಕರಣಗಳು ಪತ್ತೆಯಾಗಿದ್ದು ದೇಶದ ಕೊರೋನಾ ಪೀಡಿತರ ಸಂಖ್ಯೆ 8,78,254ಕ್ಕೆ ಏರಿಕೆಯಾಗಿದೆ. ಇದಲ್ಲದೆ ಭಾನುವಾರ 500 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 23 ಸಾವಿರದ ಗಡಿ ದಾಟಿದೆ. ಈ ಮೂಲಕ ದೇಶದಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ 23,174ಕ್ಕೆ ಏರಿಕೆಯಾಗಿದೆ.

ಈವರೆಗೆ ಕೊರೋನಾದಿಂದ ಗುಣ ಆದವರು 5,53,471 ಜನ ಮಾತ್ರ. ದೇಶದಲ್ಲಿ ಇನ್ನೂ 3,01,609 ಜನರಲ್ಲಿ ಕೊರೊನಾ ಸಕ್ರೀಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

Bottom Add3
Bottom Ad 2