Advertisement -Home Add

50 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಅತಿ ಹೆಚ್ಚು ಕೊರೊನಾ ಪೀಡಿತ ರಾಷ್ಟ್ರಗಳ ಪೈಕಿ 2ನೇ ಸ್ಥಾನದಲ್ಲಿ ಭಾರತ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ದಾಖಲೆ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, ಒಂದೇ ದಿನ 90,123 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಖ್ಯೆ 50 ಲಕ್ಷದ ಗಡಿ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 1,290 ಸೋಂಕಿತರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 82,066ಕ್ಕೆ ತಲುಪಿದೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 90,123 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 50,20,360ಕ್ಕೆ ಏರಿಕೆಯಾಗಿದೆ.

ಸದ್ಯ ದೇಶದಲ್ಲಿ 9,95,933 ಸಕ್ರಿಯ ಪ್ರಕರಣಗಳಿದ್ದು, 39,42,361 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ವಿಶ್ವದಲ್ಲಿ ಅತಿ ಹೆಚ್ಚು ಕೊರೊನಾ ಪೀಡಿತ ರಾಷ್ಟ್ರಗಳ ಪೈಕಿ ಭಾರತ ಎರಡನೇ ಸ್ಥಾನದಲ್ಲಿದೆ. ಅಮೆರಿಕ ಮೊದಲ ಸ್ಥಾನದಲ್ಲಿದೆ. ಬ್ರೆಜಿಲ್, ರಷ್ಯಾ, ಪೆರು ಕ್ರಮವಾಗಿ ಮೂರು, ನಾಲ್ಕು ಮತ್ತು ಐದನೇ ಸ್ಥಾನದಲ್ಲಿವೆ. ಅಮೆರಿಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 66,04,156ಕ್ಕೆ ತಲುಪಿದ್ದು, 39,13,264 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ಅಮೆರಿಕಾದಲ್ಲಿ 1,95,765 ಮಂದಿಗೆ ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.